HomeLatest Newsಸರಗಳ್ಳತನ ಮಾಡುತ್ತಿದ್ದ ಮಹಿಳೆ ಬಳಿ ಸಿಕ್ಕ ಚಿನ್ನಾಭರಣವೆಷ್ಟು ಗೊತ್ತಾ…?

ಸರಗಳ್ಳತನ ಮಾಡುತ್ತಿದ್ದ ಮಹಿಳೆ ಬಳಿ ಸಿಕ್ಕ ಚಿನ್ನಾಭರಣವೆಷ್ಟು ಗೊತ್ತಾ…?

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಸರಗಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಅಂತರಜಿಲ್ಲಾ ಆರೋಪಿ ಮಂಜುಳಾ ಆರ್. ಬಂಧಿತ ಮಹಿಳೆ. ಬಂಧಿತಳಿಂದ ಎರಡು ಚಿನ್ನದ ಸರ ಸೇರಿ 12 ಲಕ್ಷ ರೂಪಾಯಿ ಮೌಲ್ಯದ ಒಟ್ಟು 93 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಜನವರಿ 30ರಂದು ಹೊಸದುರ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನವಾದ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ಶಿವಕುಮಾರ್ ಆರ್., ಡಿವೈಎಸ್ಪಿ ಶಿವಕುಮಾರ್ ಟಿ.ಎಂ. ಅವರ ಮಾರ್ಗದರ್ಶನದಲ್ಲಿ ಹೊಸದುರ್ಗ ಪಿಐ ರಮೇಶ್ ಕೆ.ಟಿ., ಪಿಎಸ್ಐ ಶ್ರೀಶೈಲ, ಮಹೇಶ್ ಕುಮಾರ್ ಮತ್ತು ಸಿಬ್ಬಂದಿ ಉಮೇಶ್, ಕುಮಾರ್, ತಿಪ್ಪೇಸ್ವಾಮಿ, ಗಂಗಾಧರ, ಚಂದ್ರಪ್ಪ, ಮಂಜುಳಾ, ಸತೀಶ್, ಪ್ರಕಾಶ್ ಕಾರ್ಯಾಚರಣೆ ನಡೆಸಿ ಆರೋಪಿ ಮಂಜುಳಾ ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular