ಶಿವಮೊಗ್ಗ: ಶಾದಿ ಮಹಲ್ ಗಳಲ್ಲಿ ಮದುವೆ ವೇಳೆ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾದಿಮಹಲ್ ಗಳಲ್ಲಿ ಮದುವೆಯ ಸಮಯದಲ್ಲಿ ನಡೆಯುತ್ತಿದ್ದ ಪ್ರಕರಣಗಳ ಪತ್ತೆಗಾಗಿ ಮಾನ್ಯ ಎಸ್.ಪಿ. ನಿಖಿಲ್ ಬಿ. ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ರಮೇಶ್ ಕುಮಾರ್ ಎಸ್. ಹಾಗೂ ಉಪವಿಭಾಗದ ಡಿ.ವೈ.ಎಸ್.ಪಿ. ಬಾಬು ಅಂಜನಪ್ಪ ಅವರ ಮಾರ್ಗದರ್ಶನದಲ್ಲಿ ತುಂಗಾನಗರ ಇನ್ಸ್ ಪೆಕ್ಟರ್ ಕೆ.ಟಿ. ಗುರುರಾಜ್, ಗಾದಿಲಿಂಗಪ್ಪ ಗೌಡರ್ ಪಿಎಸ್ಐ ಅವರ ನೇತೃತ್ವದಲ್ಲಿ ಸಿಬ್ಬಂದಿಯವರಾದ ಕಿರಣ್ ಮೋರೆ, ಅರುಣ್ ಕುಮಾರ್, ಶೋಭಾರಾಣಿ ಹಾಗೂ ಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್, ರಂಗನಾಥ್, ತಮ್ಮಣ್ಣ ಜಂಬಗಿ, ಅವರನ್ನೊಳಗೊಂಡ ತಂಡವನ್ನು ರಚಿಸಿರುತ್ತಾರೆ.
ಈ ತಂಡ ಶಿವಮೊಗ್ಗ ತುಂಗಾನರ ಪೊಲೀಸ್ ಠಾಣಾ ವ್ಯಾಪ್ತಿಯ ಶಾದಿಮಹಲ್ ಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿತೆಯಾದ ರುಕ್ಸಾರ್ ಫಿರ್ದೋಸ್(30): ಸೂಳೆಬೈಲ್ ಶಿವಮೊಗ್ಗ ಈಕೆಯನ್ನು ದಿನಾಂಕ:07/03/2026 ರಂದು ವಶಕ್ಕೆ ಪಡೆದು ಆರೋಪಿತೆಯಿಂದ ತುಂಗಾನಗರ ಪೊಲೀಸ್ ಠಾಣೆಯ 4 ಪ್ರಕರಣಗಳಲ್ಲಿ ಒಟ್ಟು 18,00,000 ರೂ. ಅಂದಾಜು ಮೌಲ್ಯದ 120 ಗ್ರಾಂ ಬಂಗಾರದ ಆಭರಣಗಳನ್ನು ವಶ ಪಡಿಸಿಕೊಂಡಿರುತ್ತಾರೆ. ತಂಡದ ಕೆಲಸದ ಬಗ್ಗೆ ಮೇಲಾಧಿಕಾರಿಗಳು ಶಾಘಿಸಿರುತ್ತಾರೆ.

