ಸೊಂಟದ ಸುತ್ತಲಿನ ಕೊಬ್ಬು ಕರಗಿಸಬೇಕೇ……?

ಸೊಂಟದ ಸುತ್ತ ಇರುವ ಕೊಬ್ಬು ಕರಗಿಸುವುದು ಸವಾಲಿನ ಕೆಲಸವೇ. ಇಲ್ಲಿ ಕೊಬ್ಬು ಸಂಗ್ರಹವಾದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಆಹ್ವಾನ ಕೊಟ್ಟಂತೆಯೇ.

ನಿಂಬೆ ಹಣ್ಣು ಹೊಟ್ಟೆಯ ಕೊಬ್ಬನ್ನು ಕರಗಿಸುವ ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ನಿಂಬೆ ರಸ ಮತ್ತು ಜೇನುತುಪ್ಪವನ್ನು ಮಿಶ್ರ ಮಾಡಿ ಬೆಳಿಗ್ಗೆ ಉಪಹಾರ ಮಾಡುವ ಮುನ್ನ ಕುಡಿಯಿರಿ. ಇದು ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ಶುಂಠಿ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಹೊಟ್ಟೆಯ ಕೊಬ್ಬನ್ನು ಕರಗಿಸಿ ಕೊಳ್ಳುವವರು ಪ್ರತಿನಿತ್ಯವೂ ಶುಂಠಿ ಚಹಾವನ್ನು ಕುಡಿಯಬೇಕು.

 ಬೆಳ್ಳುಳ್ಳಿ, ಬೊಜ್ಜನ್ನು ಕರಗಿಸುವ ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೆಳ್ಳುಳ್ಳಿಯನ್ನು ಆಗಿಯುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಚೆನ್ನಾಗಿ ಆಗುತ್ತದೆ.

ಬಾದಾಮಿ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಇರುವ ಕೊಬ್ಬಿನ ಆಮ್ಲಗಳು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ. ಮತ್ತು ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ಮತ್ತು ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ. ರಾತ್ರಿ ಬಾದಾಮಿಯನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ತಿನ್ನಬೇಕು.
ಪುದೀನಾ ಪಿತ್ತಕೋಶದಿಂದ ಹೆಚ್ಚುವರಿ ಪಿತ್ತ ರಸವನ್ನು ತೆಗೆದು ಹಾಕುತ್ತದೆ. ಹೊಟ್ಟೆಯ ಕೊಬ್ಬನ್ನು ಕರಗಿಸಲು ಪುದೀನಾ ಸಹಾಯ ಮಾಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read