HomeLatest NewsBREAKING: ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಚರ್ಮರೋಗ ತಜ್ಞ ಅರೆಸ್ಟ್

BREAKING: ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಚರ್ಮರೋಗ ತಜ್ಞ ಅರೆಸ್ಟ್

ಬೆಂಗಳೂರು: ಚಿಕಿತ್ಸೆ ನೀಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಚರ್ಚ ರೋಗ ತಜ್ಞ ನನ್ನು ಬೆಂಅಗ್ಳೂರಿನ ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಾ.ಪ್ರವೀಣ್ ಬಂಧಿತ ಚರ್ಮ ರೋಗ ತಜ್ಞ. ಬೆಂಗಳೂರಿನ ಆಸ್ಟಿನ್ ಟೌನ್ ನಿವಾಸಿ. ಚಿಕಿತ್ಸೆ ಬಂದ ಯುವತಿಗೆ ವೈದ್ಯ ಲೈಂಗಿಕ ಕಿರುಕುಳ ನೀಡಿದ್ದ. ಯುವತಿ ವೈದ್ಯನ ಬಳಿ ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಬಂದಿದ್ದಳು. ಈ ವೇಳೆ ವೈದ್ಯ ಯುವತಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದ. ನೊಂದ ಯುವತಿ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೋಷಕರು ವೈದ್ಯನ ಕ್ಲಿನಿಕ್ ಬಳಿ ಬಂದು ಗಲಾಟೆ ಮಾಡಿದ್ದರು. ಅಲ್ಲದೇ ಅಶೋಕನಗರ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ವೈದ್ಯನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular