ಬೀದರ್: ಡೆತ್ ನೋಟ್ ಬರೆದಿಟ್ಟು ಬೀದರ್ ನ ಬ್ರಿಮ್ಸ್ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುನಿಲ್ ತಾಪ್ಸೆ(58) ಆತ್ಮಹತ್ಯೆ ಮಾಡಿಕೊಂಡ ವೈದ್ಯ ಎಂದು ಹೇಳಲಾಗಿದೆ,
ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಅನಾರೋಗ್ಯ ಕಾರಣವೆಂದು ಡೆತ್ ನೋಟ್ ನಲ್ಲಿ ಬರೆದಿರುವ ಅವರು ವಸತಿಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.
ಸುನಿಲ್ ತಾಪ್ಸೆ ಬೆಡ್ರೂಮ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷಗಳಿಂದ ಬ್ರಿಮ್ಸ್ ನಲ್ಲಿ ಸುನಿಲ್ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

