HomeIndiaSHOCKING NEWS: ಮೆಡಿಕಲ್ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ವೈದ್ಯ

SHOCKING NEWS: ಮೆಡಿಕಲ್ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ವೈದ್ಯ

ಕೊಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ವೈದ್ಯನೊಬ್ಬ ಮೆಡಿಕಲ್ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಹರ್ಯಾಣದ ರೋಹ್ಟಕ್ ನಲ್ಲಿ ಈ ಘಟನೆ ನಡೆದಿದ್ದು, ವೈದ್ಯ, ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿ ವೈದ್ಯನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪಿಜಿಎಂಎಸ್ ಬಿಡಿಎಸ್ ವಿದ್ಯಾರ್ಥಿನಿಯೊಬ್ಬರು ವೈದ್ಯ ತನ್ನನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಜಡ್ಜ್ ಮುಂದೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿನಿ ಹಾಗೂ ಆರೋಪಿ ವೈದ್ಯ ಪಿಜಿಎಂಎಸ್ ಗೆ ಸೇರಿದವರಾಗಿದ್ದು, ವಿದ್ಯಾರ್ಥಿನಿ ಬಿಡಿಎಸ್ ಓದುತ್ತಿದ್ದಾಳೆ. ಇಬ್ಬರೂ ಐದಾರು ತಿಂಗಳಿಂದ ಪರಿಚಿತರಾಗಿದ್ದರು. ಇದೀಗ ವೈದ್ಯ ಏಕಾಏಕಿ ವಿದ್ಯಾರ್ಥಿನಿಯನ್ನು ಅಪಹರಿಸಿ, ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಯಾವುದೇ ಲೈಂಗಿಕ ಕಿರುಕುಳ ಅಥವಾ ಅತ್ಯಾಚಾರ ನಡೆಸಿರುವ ಬಗ್ಗೆ ವರದಿಯಾಗಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular