HomeKarnatakaಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ವೈದ್ಯರಿಂದ ಮಾನವ ಸರಪಳಿ ರಚಿಸಿ ಮೌನ...

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ವೈದ್ಯರಿಂದ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ

ಶಿವಮೊಗ್ಗ: ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಹಾಗೂ ವೈದ್ಯರ ಸುರಕ್ಷತೆಗೆ ಆಗ್ರಹಿಸಿ ರಾಜ್ಯದಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಆಸ್ಪತ್ರೆಗಳ ಸೇವೆಯಲ್ಲಿ ಭಾರಿ ವ್ಯತ್ಯವಾಗಿದೆ. ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗದಲ್ಲಿಯೂ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ. ಗೋಪಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದಲ್ಲಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಮೆಗ್ಗಾನ್ ಆಸ್ಪತ್ರೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ, ಅತ್ಯಾಚಾರ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ವೈದ್ಯರಿಗೆ ರಕ್ಷಣೆ ನಿಡಬೇಕು ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular