HomeLatest Newsಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಪ್ರಕರಣ ಬಾಲಕಿಗೆ ಗರ್ಭಪಾತ: ವೈದ್ಯೆ ಅಮಾನತು

ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಪ್ರಕರಣ ಬಾಲಕಿಗೆ ಗರ್ಭಪಾತ: ವೈದ್ಯೆ ಅಮಾನತು

ಶಿವಮೊಗ್ಗ: ಪೋಕ್ಸೊ ಪ್ರಕರಣ ಎಂದು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಬಾಲಕಿಗೆ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಡಿ. ಪ್ರತಿಮಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತ ಮಾಡಿಸಿದ ಹಿನ್ನೆಲೆಯಲ್ಲಿ ಡಾ. ಪ್ರತಿಮಾ ಸೇರಿ 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು. ಸಾಗರ ನಗರ ಠಾಣೆ ಪೋಲೀಸರು ಪೋಕ್ಸೊ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಿದ್ದರು.

ಸಾಗರ ಟೌನ್ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ತನಿಖಾ ತಂಡ ಪ್ರಕರಣದ ಬಗ್ಗೆ ನೀಡಿದ ವರದಿ ಮತ್ತು ದಾಖಲೆ ಪರಿಶೀಲಿಸಿದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಾಗರ ತಾಲೂಕು ವೈದ್ಯಾಧಿಕಾರಿ ಜಂಟಿ ಪರಿಶೀಲನಾ ವರದಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯೆ ಡಾ. ಪ್ರತಿಮಾ ವಿರುದ್ಧ ಕರ್ತವ್ಯ ಲೋಪ ಸೇರಿದಂತೆ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ. ಇದನ್ನು ಆದರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular