HomeKarnatakaBIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ...

BIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ ದಂಡ: ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ.

ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ ಅಂತವರಿಗೆ ಗರಿಷ್ಠ 7 ವರ್ಷದವರೆಗೆ ಜೈಲು ಶಿಕ್ಷೆ, 2 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಿಸಲು, ವೈದ್ಯರ ಮೇಲೆ ಹಲ್ಲೆ ತಡೆಗಟ್ಟಲು ಎಲ್ಲಾ ಆಸ್ಪತ್ರೆಗಳು ಆಸ್ಪತ್ರೆ ಭದ್ರತಾ ಸಮಿತಿ ಮತ್ತು ಹಿಂಸೆ ತಡೆ ಸಮಿತಿ ಸ್ಥಾಪಿಸಬೇಕೆಂದು ಸೂಚನೆ ನೀಡಲಾಗಿದೆ. ಕಾನೂನು ಜಾಗೃತಿ ಮೂಡಿಸುವ ಬಗ್ಗೆ ಎಲ್ಲಾ ಆಸ್ಪತ್ರೆಗಳಲ್ಲಿ ಕಾನೂನು ನಿಬಂಧನೆ ಫಲಕಗಳನ್ನು ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular