HomeLatest NewsSHOCKING : ವೈದ್ಯರ ಎಡವಟ್ಟು..? ಭುಜದ ನೋವಿಗೆ ಇಂಜೆಕ್ಷನ್ ತೆಗೆದುಕೊಂಡ ಯುವಕ ಸಾವು.!

SHOCKING : ವೈದ್ಯರ ಎಡವಟ್ಟು..? ಭುಜದ ನೋವಿಗೆ ಇಂಜೆಕ್ಷನ್ ತೆಗೆದುಕೊಂಡ ಯುವಕ ಸಾವು.!

ಮಡಿಕೇರಿ : ಭುಜದ ನೋವಿಗೆ ಇಂಜೆಕ್ಷನ್ ತೆಗೆದುಕೊಂಡು ಯುವಕ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಪುತ್ರ ವಿನೋದ್ ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಗ ಸಾವನ್ನಪ್ಪಿದ್ದಾನೆ ಎಂದು ಪೋಷಕರು ಆರೋಪ ಮಾಡಿದ್ದು, ಮೃತ ದೇಹವನ್ನ ಸದ್ಯ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಏನಿದು ಘಟನೆ

ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹಾಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲಿರುವ ಖಾಸಗಿ ಕ್ಲಿನಿಕ್ ಗೆ ಬಂದಿದ್ದಾರೆ. ಯುವಕನನ್ನಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಇಂಜೆಕ್ಷನ್ ಕೊಟ್ಟು ಮಾತ್ರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೂ ನೋವು ಕಡಿಮೆಯಾಗದ ಹಿನ್ನೆಲೆ ಮತ್ತೊಂದು ಇಂಜೆಕ್ಷನ್ ನೀಡಿದ್ದಾರೆ. ಆದರೆ ಮನೆಗೆ ಬಂದ ಕೂಡಲೇ ವಿನೋದ್ ಅಸ್ವಸ್ಥರಾಗಿ ಬಿದ್ದಿದ್ದು, ಕೂಡಲೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟರಲ್ಲೇ ವಿನೋದ್ ಪ್ರಾಣಪಕ್ಷಿ ಹಾರಿ ಹೋಗಿದೆ. ವಿನೋದ್ ಗೆ ಭುಜದ ನೋವು ಬಿಟ್ಟರೆ ಯಾವುದೇ ಸಮಸ್ಯೆ ಇರಲಿಲ್ಲ ವೈದ್ಯರು ಇಂಜೆಕ್ಷನ್ ಕೊಟ್ಟಿದ್ದಕ್ಕೆ ಹೀಗೆ ಆಗಿದೆ ಎಂದು ವಿನೋದ್ ಕುಟುಂಬದವರು ಆಕ್ರೋಶ ಹೊರ ಹಾಕಿದ್ದಾರೆ. ಅದೇನೆ ಇರಲಿ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ವಿನೋದ್ ಸಾವಿಗೆ ಕಾರಣ ತಿಳಿದು ಬರಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular