HomeKarnatakaಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ಧಾರವಾಡ: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 09 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕಾ ಆಸ್ಪತ್ರೆಗಳಲ್ಲಿ 05 ತುರ್ತು ಚಿಕಿತ್ಸ ವೈದ್ಯಾಧಿಕಾರಿ ಮತ್ತು 11 ತಜ್ಞ  ವೈದ್ಯಾಧಿಕಾರಿಗಳ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.  ಮಾರ್ಚ್ 25, 2025 ರಿಂದ ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳುವವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುವುದು.

ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಧಾರವಾಡ – 580008 ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular