HomeKarnatakaರೈತರಿಗೆ ಕಂದಾಯ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲಾ ದಾಖಲೆ ಡಿಜಟಲೀಕರಣ

ರೈತರಿಗೆ ಕಂದಾಯ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲಾ ದಾಖಲೆ ಡಿಜಟಲೀಕರಣ

ಬಳ್ಳಾರಿ: ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಭೂ ಸುರಕ್ಷಾ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ಅಭಿಲೇಖನಾಲಯದ ಸೇರಿದಂತೆ ಈಗಾಗಲೇ 23,11,771 ಪುಟಗಳ ಮೌಲ್ಯಾಧಾರಿತ ರೈತರ ದಾಖಲೆಗಳನ್ನು ಗಣಕೀಕರಿಸಲಾಗಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲ್ಯಾಂಡ್ ಬೀಟ್:

ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು, ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ ಎಂದರು.

ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80.27 ರಷ್ಟು ಅಂದರೆ 55.638 ಸರ್ಕಾರಿ ಜಮೀನುಗಳ ಪೈಕಿ 48,786 ಆಸ್ತಿಗಳನ್ನು ಲ್ಯಾಂಡ್ ಬೀಟ್ ತಂತ್ರಾಂಶಕ್ಕೆ ಒಳಪಡಿಸಲಾಗಿದೆ. ಆಗಸ್ಟ್ ತಿಂಗಳಿನಿಂದ ಸರ್ವೇಯರ್ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಹಣಿ-ಆಧಾರ್ ಜೋಡಣೆ:

ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಯೋಜನೆಯಲ್ಲಿ ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80 ರಷ್ಟು 5,23,542 ರೈತರ ಜಮೀನು ಪೈಕಿ 4,12,084 ಭೂ ಮಾಲೀಕರ ಜಮೀನನ್ನು ಅವರ ಆಧಾರ್ ಸಂಖ್ಯೆಗೆ ಜೋಡಣೆ ಮಾಡಲಾಗಿದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular