ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎರಡು ಯುನಿಟ್ ಗಳು ಧಗಧಗನೆ ಹೊತ್ತಿ ಉರಿದಿವೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿಯ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಅಡ್ವಾನ್ಸ್ ಟೆಕ್ನಾಲಜೀಸ್ ಯುನಿಟ್ 2 ಕಂಪನಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಆರಂಭಿಸುವೆ.
ಇದು ಕೇಬಲ್ ತಯಾರಿಕಾ ಕಂಪನಿಯಾಗಿದ್ದು, ಮೊದಲಿಗೆ ಕಂಪನಿಯಲ್ಲಿರುವ ಮರದ ತುಂಡುಗಳಿಗೆ ಹೊತ್ತಿಕೊಂಡ ಬೆಂಕಿ ಇಡೀ ಕಂಪನಿಗೆ ಆವರಿಸಿದೆ. ನಂತರ ಕೇಬಲ್ಗಳಿಗೂ ವ್ಯಾಪಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

