ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಾಂತ್ವನ ಹೇಳುವುದಕ್ಕೂ ಶೋಭಾ ಅವರಿಗೆ ಪುರಸೊತ್ತು ಇಲ್ಲವೇ ? ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ಶೋಭಾ ಕರಂದ್ಲಾಜೆಯವರ ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ, ಅಪಘಾತದಲ್ಲಿ ಮೃತರಾದ ವ್ಯಕ್ತಿಯ ಕುಟುಂಬಕ್ಕೆ ಕನಿಷ್ಠ ಸಾಂತ್ವನ ಹೇಳುವುದಕ್ಕೂ ಶೋಭಾ ಅವರಿಗೆ ಪುರಸೊತ್ತು, ಮಾನವೀಯತೆ ಇಲ್ಲವೇ? ಅಪಘಾತವಾದಾಗ ತಕ್ಷಣ ಸೂಕ್ತ ಚಿಕಿತ್ಸೆಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದ ಶೋಭಾ ಕರಂದ್ಲಾಜೆಯವರಲ್ಲಿ ಮಾನವೀಯತೆಯ ಲವಲೇಶವೂ ಇಲ್ಲದಾಗಿದೆ. ಗಾಯಾಳುವನ್ನು ಆಟೋರಿಕ್ಷಾದಲ್ಲಿ ಕರೆದುಕೊಂಡು ಹೋಗುವಂತ ದುರ್ಗತಿ ಬಂದಿರುವುದು ಬಿಜೆಪಿ ನಾಯಕರ ಧೂರ್ತತನಕ್ಕೆ ಹಿಡಿದ ಕನ್ನಡಿ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರನೊಬ್ಬ ಬಲಿಯಾದ ಘಟನೆ ನಿನ್ನೆ ಬೆಂಗಳೂರಿನಲ್ಲಿ ನಡೆದಿತ್ತು. ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು.
https://twitter.com/INCKarnataka/status/1777305050420768796