HomeLatest Newsದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಕರೆಯಬಾರದೆಂದು ಸಂವಿಧಾನದಲ್ಲಿ ಇದೆಯೇ?: ಪ್ರತಾಪ್ ಸಿಂಹ ವಿರುದ್ಧ ಸಂತೋಷ್ ಲಾಡ್...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಕರೆಯಬಾರದೆಂದು ಸಂವಿಧಾನದಲ್ಲಿ ಇದೆಯೇ?: ಪ್ರತಾಪ್ ಸಿಂಹ ವಿರುದ್ಧ ಸಂತೋಷ್ ಲಾಡ್ ಆಕ್ರೋಶ

ಬಳ್ಳಾರಿ: ಸೆಪ್ಟಂಬರ್ 22ರಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಚಿವ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಜಿಲ್ಲೆ, ಸಂಡೂರಿನಲ್ಲಿ ಮಾತನಾಡಿದ ಸಂತೋಷ್ ಲಾಡ್ ಅವರು, ಬಾನು ಮುಸ್ತಾಕ್ ಅವರನ್ನು ಕರೆಯಬಾರದೆಂದು ಸಂವಿಧಾನದಲ್ಲಿ ಇದೆಯೇ? ಎಲ್ಲದಕ್ಕೂ ವಿರೋಧ ಮಾಡುತ್ತಾ ಹೋದರೆ ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

2.5 ಲಕ್ಷ ಕೋಟಿ ಕೊಟ್ಟ ಉದ್ಯಮಿ ಅಜೀಮ್ ಪ್ರೇಂ ಜಿ ಅವರು ಯಾವ ಸಮುದಾಯದವರು? ಅಬ್ದುಲ್ ಕಲಾಂ ರಾಷ್ಟ್ರಪತಿಯಾಗಿದ್ದರು. ನಾವು ವಿರೋಧ ಮಾಡಿದ್ವಾ? ವಿರೋಧ ಮಾಡಿದವರು ಅವತ್ತು ಕೇಕ್ ತಿನ್ನಲು ಯಾಕೆ ಪಾಕಿಸ್ತಾನಕ್ಕೆ ಹೋದ್ರಿ? ಎಂದು ಸಂಡೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ದ್ವಂದ್ವ ನಿಲುವು ಪ್ರದರ್ಶಿಸುತ್ತಿದೆ. ಮೊದಲು ಎಸ್ಐಟಿ ರಚನೆ ಮಾಡಿದ್ದನ್ನು ಸ್ವಾಗತಿಸಿದ್ದರು. ಈಗ ಧಾರ್ಮಿಕ ಸ್ಥಳಕ್ಕೆ ಅಪಮಾನ ಎಂದು ಆರೋಪ ಮಾಡುತ್ತಿದ್ದಾರೆ. ಕಾನೂನಾತ್ಮಕವಾಗಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಅಸ್ಥಿಪಂಜರ ಸಿಗದಿದ್ದಾಗ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದರು. ಅಸ್ಥಿಪಂಜರ ಸಿಕ್ಕಿದ್ದರೆ ಬಿಜೆಪಿಯವರು ಏನು ಮಾಡುತ್ತಿದ್ದರು? ಅಸ್ಥಿಪಂಜರ ಸಿಕ್ಕಿಲ್ಲ. ಅದರ ಬಗ್ಗೆ ಮಾತನಾಡುವುದಿಲ್ಲ, ಷಡ್ಯಂತ್ರ ಇರುವುದಕ್ಕೆ ತನಿಖೆ ಮಾಡಲಾಯಿತು ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular