HomeIndiaBIG NEWS: 7 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ...

BIG NEWS: 7 ವರ್ಷದ ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಝಾನ್ಸಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. 7 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಬಾಲಕನನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಝಾನ್ಸಿಯ 7 ವರ್ಷದ ಬಾಲಕ ವಿರಾಜ್ 2ನೇ ತರಗತಿ ಓದುತ್ತಿದ್ದು, ಶಾಲೆಯಿಂದ ಮನೆಗೆ ಬರುವಾಗ ಮನೆಯ ಬಳಿಯೇ ಬೀದಿನಾಯಿಗಳು ದಾಳಿ ನಡೆಸಿದೆ. ವಿರಾಜ್ ನನ್ನು ಸುತ್ತುವರೆದ ಬೀದಿನಾಯಿಗಳು ಆತನನ್ನು ಕಚ್ಚಿ ಗಾಯಗೊಳಿಸಿವೆ. ಬಾಲಕ ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿ ನಾಯಿಯನ್ನು ಓಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದಿನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಝಾನ್ಸಿಯಲ್ಲಿ ಬೀದಿನಾಯಿಗಳನ್ನು ಹಿಡಿಯಲು ನಗರಸಭೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಆತಂಕದಲ್ಲಿ ಓಡಾಡುವ ಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular