HomeKarnatakaಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆಯೇ ನಾಯಿ ದಾಳಿ; ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ...

ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಸಮುದಾಯ ಆರೋಗ್ಯಾಧಿಕಾರಿ ಮೇಲೆಯೇ ನಾಯಿ ದಾಳಿ; ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆರೋಗ್ಯಾಧಿಕಾರಿ…!


ಕೊಡಗು: ಬಾಣಂತಿ ಆರೋಗ್ಯ ವಿಚಾರಿಸಲು ಹೋದ ಆರೋಗ್ಯ ಇಲಾಖೆ ಅಧಿಕಾರಿ ಮೇಲೆಯೇ ನಾಯಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾರಾಣೆಯಲ್ಲಿ ನಡೆದಿದೆ.

ಸಮುದಾಯ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯಾ ನಾಯಿ ದಾಳಿಯಿಂದ ಗಾಯಗೊಂಡವರು. ಇತ್ತೀಚೆಗೆ ಹೆರಿಗೆ ಆಗಿದ್ದ ತಾಯಿ-ಮಗಿವಿನ ಆರೋಗ್ಯ ವಿಚಾರಿಸಲು ಪಾರಾಣೆ ಗ್ರಾಮದ ಮಾಚಯ್ಯ ಅವರ ಮನೆಗೆ ತೆರಳಿದ್ದರು. ಔಷಧ ಕೊಟ್ಟು ವಾಪಸ್ ಆಗುವಾವ ನಾಯಿ ದಾಳಿ ಮಾಡಿದೆ.

ದೊಡ್ದ ನಾಯಿಯಾಗಿದ್ದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಧಿಕಾರಿ ಭವ್ಯಾ ಕೆಳಗೆ ಬಿದ್ದಿದ್ದಾರೆ. ಅವರ ಕೈ ಹಾಗೂ ದೇಹದ ಹಲವೆಡೆ ನಾಯಿ ಕಚ್ಚಿ ಗಾಯಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಗಾಯಗೊಂಡ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular