HomeLatest Newsಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ ಶುಭಾರಂಭ

ಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ ಶುಭಾರಂಭ

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಭಾರತ ಶುಭಾರಂಭ ಮಾಡಿದೆ.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದು ಕೊಂಡಿತು. ಆದರೆ, ಅವರ ನಿರ್ಧಾರ ತಪ್ಪಾಗಿತ್ತು. 27.3 ಓವರ್ ಗಳಲ್ಲಿ 116 ರನ್ ಗಳಿಗೆ ದಕ್ಷಿಣ ಆಫ್ರಿಕಾ ಎಲ್ಲಾ ವಿಕೆಟ್ ಕಳೆದುಕೊಂಡಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಪರ ಆರ್ಶ್ ದೀಪ್ ಸಿಂಗ್ 5 ವಿಕೆಟ್ ಪಡೆದರು. ಆವೇಷ್ ಖಾನ್ 4 ವಿಕೆಟ್, ಕುಲದೀಪ್ ಯಾದವ್ ಒಂದು ವಿಕೆಟ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ಆಂಡಿಲ್ ಫೆಹ್ಲುಕ್ವಾಯೊ 49 ಎಸೆತಗಳಲ್ಲಿ 33 ರನ್ ಗಳಿಸಿದರು. ಟೋನಿ ಜಿ ಝೋರ್ಜಿ 28, ಐಡೆನ್ ಮರ್ಕ್ರಮ್ 12 ರನ್ ಗಳಿಸಿದರು.

ಗೆಲುವಿನ ಗುರಿ ಬೆನ್ನತ್ತಿದ ಭಾರತ 16.4 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಋತುರಾಜ್ ಗಾಯಕ್ವಾಡ್ 5, ಸಾಯಿ ಸುದರ್ಶನ್ ಅಜೇಯ 55, ಶ್ರೇಯಸ್ ಅಯ್ಯರ್ 52, ತಿಲಕ್ ವರ್ಮ ಅಜೇಯ 1 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ಪರ ವಿಯಾನ್ ಮಲ್ಡರ್ 1, ಆಂಡಿಲ್ ಫೆಹ್ಲುಕ್ವಾಯೊ 1 ವಿಕೆಟ್ ಪಡೆದರು.

ಭಾರತ 16.4 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ನವೆಂಬರ್ 19 ರಂದು ಗ್ಕೆಬರ್ಹಾದಲ್ಲಿ 2ನೇ ಏಕದಿನ ಪಂದ್ಯ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್:

ದಕ್ಷಿಣ ಆಫ್ರಿಕಾ 116/10(27.3) V/s ಭಾರತ 117/2(16.4)

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular