HomeLatest NewsBIG NEWS : 'ಗೃಹಲಕ್ಷ್ಮಿ' ಮರುನೋಂದಣಿ ವದಂತಿ ನಂಬಬೇಡಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

BIG NEWS : ‘ಗೃಹಲಕ್ಷ್ಮಿ’ ಮರುನೋಂದಣಿ ವದಂತಿ ನಂಬಬೇಡಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟನೆ

ಗೃಹಲಕ್ಷ್ಮಿ  ಯೋಜನೆಯಡಿ ಈಗಾಗಲೇ ನೋಂದಾಯಿತರಾಗಿರುವ ಫಲಾನುಭವಿಗಳ ಮರುಅರ್ಜಿ ಅಥವಾ ಮರುನೋಂದಣಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಸಾರ್ವಜನಿಕರು ಇಂತಹ ವದಂತಿಗಳನ್ನು ನಂಬಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮರುನೋಂದಣಿ ಮಾಡಿಸಿಕೊಳ್ಳಬೇಕು ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬೆನ್ನಲ್ಲೇ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಸ್ಪಷ್ಟನೆ ನೀಡಿದೆ. ಗೃಹಲಕ್ಷ್ಮಿ ಯೋಜನೆಗೆ ಯಾವುದೇ ಮರುನೋಂದಣಿ ಪ್ರಕ್ರಿಯೆ ಆರಂಭಿಸಿಲ್ಲ ಎಂದು ಇಲಾಖೆ ತಿಳಿಸಿದ್ದು, ಸುಳ್ಳು ಸಂದೇಶಗಳು ಹಾಗೂ ನಕಲಿ ಲಿಂಕ್‌ಗಳನ್ನು ನಂಬಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬಾರದು ಎಂದು ಮಹಿಳೆಯರಿಗೆ ಎಚ್ಚರಿಕೆ ನೀಡಿದೆ.

ಗೃಹಲಕ್ಷ್ಮಿ ಯೋಜನೆಯ ಮರುನೋಂದಣಿ ಅಥವಾ ಮರುಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರಧಾನ ಕಚೇರಿಯಿಂದ ಇದುವರೆಗೆ ಯಾವುದೇ ಅಧಿಕೃತ ಆದೇಶವಾಗಲಿ ಅಥವಾ ಮಾರ್ಗಸೂಚಿಗಳಾಗಲಿ ಹೊರಬಿದ್ದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಚೇರಿಗಳಿಗೆ ಅಲೆಯಬೇಡಿ

ಸರ್ಕಾರದ ಮುಂದಿನ ಆದೇಶ ಬರುವವರೆಗೆ ಸದ್ಯದ ಫಲಾನುಭವಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿರುವುದಿಲ್ಲ. ಹಾಗಾಗಿ, ಇ-ಕೆವೈಸಿ ಅಥವಾ ಮರುನೋಂದಣಿಗಾಗಿ ಫಲಾನುಭವಿಗಳು ಅನಗತ್ಯವಾಗಿ ಸಂಬಂಧಪಟ್ಟ ಕಚೇರಿಗಳಿಗೆ ಭೇಟಿ ನೀಡಿ ಸಾರ್ವಜನಿಕರು ತೊಂದರೆಗೊಳಗಾಗಬಾರದು.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಮುಂದಿನ ದಿನಗಳಲ್ಲಿ ಇಲಾಖೆಯಿಂದ ಯಾವುದೇ ಹೊಸ ಆದೇಶ ಅಥವಾ ಮಾರ್ಗಸೂಚಿಗಳು ಹೊರಬಂದಲ್ಲಿ, ಅದನ್ನು ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕವೇ ಸಾರ್ವಜನಿಕರಿಗೆ ತಲುಪಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular