HomeKarnatakaಮಧ್ಯವರ್ತಿಗಳನ್ನು ಕಚೇರಿಯೊಳಗೆ ಬಿಟ್ಟುಕೊಳ್ಳಬೇಡಿ: ಸಿಎಂ ಸಿದ್ಧರಾಮಯ್ಯ

ಮಧ್ಯವರ್ತಿಗಳನ್ನು ಕಚೇರಿಯೊಳಗೆ ಬಿಟ್ಟುಕೊಳ್ಳಬೇಡಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಕೆಎಎಸ್ ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹಾಗೂ ನೂತನವಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೇ, ಶೀಘ್ರವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು. ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ. ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ, ಪ್ರಾಮಾಣಿಕವಾಗಿ ಮಾಡಬೇಕು. ಕೆಎಎಸ್ ಅಧಿಕಾರಿಗಳ ಸಂಘಕ್ಕೆ ನೂರು ವರ್ಷಗಳ ಇತಿಹಾಸವಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ, ಮೂಲಭೂತ ಸೌಕರ್ಯಗಳು, ಕೈಗಾರಿಕೆಗಳ ಬೆಳವಣಿಗೆಗೆ ಕಾರಣೀಭೂತಗಿದ್ದಾರೆ. ಅವರ ಕಾಲದಲ್ಲಿ ದಿವಾನರಾಗಿದ್ದವರು ಸಂಘದ ಅಧ್ಯಕ್ಷರಾಗಿದ್ದರು ಎನ್ನುವುದು ಈ ಸಂಘದ ಹೆಗ್ಗಳಿಕೆ. ಅವರೆಲ್ಲರು ದಕ್ಷ ಆಡಳಿತದ ಮೂಲಕ ನಮಗೆ ದಾರಿದೀಪವಾಗಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಹಾಗೂ ಶಾಸಕಾಂಗ ಒಟ್ಟಾಗಿ ಕೆಲಸ ಮಾಡಬೇಕು. ಈ ಎರಡೂ  ಜನರ ಪ್ರತಿನಿಧಿಗಳಾಗಿ ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ. ನಿಮಗೆ ನಿವೃತ್ತರಾಗುವವರೆಗೆ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶವಿದೆ. ಅಸಮಾನತೆ ಇರುವ ಸಮಾಜದಲ್ಲಿ ದುರ್ಬಲ ವರ್ಗಕ್ಕೆ ಸ್ಪಂದಿಸಬೇಕು. ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಬಡವರ ಕಾಳಜಿ, ಸಮಾಜದ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಜನರಿಗೆ ಸ್ಪಂದಿಸಲು ಸಾಧ್ಯ ಎಂದರು.

ನಮ್ಮ ಕೆಲಸವನ್ನು ನಾವು ಪ್ರೀತಿಸಬೇಕು. ಗ್ರಾಮೀಣ ಜನರನ್ನು ಪ್ರೀತಿಯಿಂದ ಮಾತನಾಡಿಸಿ ಅವರ ಸಮಸ್ಯೆ ಅರ್ಥೈಸಿಕೊಂಡು ಬಗೆಹರಿಸಿದರೆ ಅವರು ನಿಮ್ಮನ್ನು ಮರೆಯುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ. ಸರ್ಕಾರ ರೂಪಿಸುವ ನೀತಿಗಳು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳ ಪಾತ್ರ ಹಿರಿದು. ಜನಸೇವೆಗೆ ದೊರಕಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು. ತೃಪ್ತಿದಾಯಕವಾಗಿ ಕೆಲಸ ಮಾಡಿರುವುದಕ್ಕಿಂತ ದೊಡ್ಡ ಪ್ರಮಾಣಪತ್ರ ಇನ್ನೊಂದಿಲ್ಲ. ಈ ಬಗ್ಗೆ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಜೀವನ ಸಾರ್ಥಕವಾಗಿ ಸೇವೆ ತೃಪಿಕರವಾಗಿ ಮಾಡಿದ್ದೇನೆ ಎಂಬ ಭಾವನೆ ನಿಮ್ಮಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಪದೋನ್ನತಿ ಬಗ್ಗೆ ಕಂದಾಯ ಸಚಿವರು ಕಾರ್ಯೋನ್ಮುಖರಾಗಿದ್ದು, ಶ್ರೀಘ್ರವಾಗಿ ಪದೋನ್ನತಿ ಆಗಲಿದೆ. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡಲು ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕಾವೇರಿ, ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶಿವಸ್ವಾಮಿ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular