HomeLatest Newsಸಂತ್ರಸ್ತೆಯರನ್ನೇ ಆರೋಪಿಗಳಾಗಿಸಬೇಡಿ: ವೇಶ್ಯಾವಾಟಿಕೆ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ

ಸಂತ್ರಸ್ತೆಯರನ್ನೇ ಆರೋಪಿಗಳಾಗಿಸಬೇಡಿ: ವೇಶ್ಯಾವಾಟಿಕೆ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪತ್ತೆಯಾಗುವ ಸಂತ್ರಸ್ತ ಮಹಿಳೆಯರನ್ನೇ ಆರೋಪಿಗಳೆಂದು ಪರಿಗಣಿಸಿ ಪ್ರಕರಣ ದಾಖಲಿಸಬಾರದು. ನೈತಿಕ ಪೊಲೀಸ್ ಗಿರಿ ರೀತಿಯಲ್ಲಿ ಸಂತ್ರಸ್ತೆಯರನ್ನು ಅಪರಾಧಿಗಳಂತೆ ಕಾಣುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದಿಂದ ಈ ಆದೇಶ ನೀಡಲಾಗಿದೆ.

ಅನೈತಿಕ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ವೇಶ್ಯಾವಾಟಿಕೆಗೆ ಪ್ರೇರೇಪಿಸುವವರು ಅಥವಾ ಅಂತಹ ಉದ್ದೇಶಕ್ಕಾಗಿ ವ್ಯಕ್ತಿಗಳನ್ನು ಬಳಸಿಕೊಳ್ಳುವವರು ಶಿಕ್ಷಾರ್ಹರೇ ಹೊರತೂ ಆ ಜಾಲಕ್ಕೆ ಬಲಿಯಾದ ಮಹಿಳೆಯರಲ್ಲ. ಲೈಂಗಿಕ ಶೋಷಣೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೇ ವಿನಃ ಸಂತ್ರಸ್ತೆಯರನ್ನು ಜೈಲಿಗೆ ಕಳುಹಿಸುವುದು ಕಾನೂನಿನ ದುರುಪಯೋಗ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಮಹಿಳೆ ವಿರುದ್ಧದ ವೇಶ್ಯಾವಾಟಿಕೆ ಆರೋಪ ಪ್ರಕರಣ ರದ್ದು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular