ಬೆಂಗಳೂರು : ರಾಜ್ಯ ಸರ್ಕಾರವು ಯಶಸ್ವಿ 2 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ ಹಮ್ಮಿಕೊಂಡಿದೆ. 3 ಲಕ್ಷಕ್ಕೂ ಹೆಚ್ಚು ಜನರು ಈ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.
ಮೇ 20ರಂದು ತಪ್ಪದೇ ಬನ್ನಿ ಹೊಸಪೇಟೆಗೆ.. ಎರಡು ವರ್ಷದ ಗ್ಯಾರಂಟಿ ಬದುಕು ಸಂಭ್ರಮಕ್ಕೆ ಎಂದು ಸಿಎಂ ಸಿದ್ದರಾಮಯ್ಯ ವೀಡಿಯೋ ಮೂಲಕ ಸರ್ವರನ್ನೂ ಆಹ್ವಾನಿಸಿದ್ದಾರೆ.

