HomeEntertainmentದರ್ಶನ್ ಹೆಸರನ್ನು ದುರ್ಬಳಕೆ ಮಾಡಿಕೊಂಡ ವಂಚಕ ಮಲ್ಲು ನಂಬಿ ಮೋಸ ಹೋಗಬೇಡಿ: ದಿನಕರ್ ತೂಗುದೀಪ

ದರ್ಶನ್ ಹೆಸರನ್ನು ದುರ್ಬಳಕೆ ಮಾಡಿಕೊಂಡ ವಂಚಕ ಮಲ್ಲು ನಂಬಿ ಮೋಸ ಹೋಗಬೇಡಿ: ದಿನಕರ್ ತೂಗುದೀಪ

ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಇತ್ತೀಚೆಗೆ ದಿಢೀರ್ ಪ್ರತ್ಯಕ್ಷರಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು. ತಾವು ನಾಪತ್ತೆಯಾಗಿದ್ದಕ್ಕೆ ಕಾರಣವೇನು ಎಂಬುದನ್ನು ತಿಳಿಸಿದ್ದರು. ಇದೀಗ ಮಲ್ಲಿಕಾರ್ಜುನ್ ವಿರುದ್ಧ ದರ್ಶನ್ ಸಹೋದರ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ಆಕ್ರೋಶ ಹೊರಹಾಕಿದ್ದು, ಆತನನ್ನು ನಂಬಿ ಮೋಸ ಹೋಗಬೇಡಿ ಎಂದು ತಿಳಿಸಿದ್ದಾರೆ.

ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಎಂಬ ಫ್ರಾಡ್ ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ ನನ್ನ ಹೆಸರನ್ನು, ದರ್ಶನ್ ರವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಪರಿಚಯದವರ, ಸ್ನೇಹಿತರ ಹಾಗೂ ನಮ್ಮ ಸಂಪರ್ಕದಲ್ಲಿದ್ದ ಅನೇಕ ವ್ಯಕ್ತಿಗಳ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದವನು ಈಗ ದಿಢೀರನೆ ಪ್ರತ್ಯಕ್ಷನಾಗಿ 16-04-2026 ರಂದು ಪತ್ರಿಕಾಗೋಷ್ಠಿ ನಡೆಸಿರುತ್ತಾನೆ. ಅದರಲ್ಲಿ ಜನರನ್ನು ನಂಬಿಸಲು ತನಗೆ ಬೇಕಾದಂತೆ ಹೇಳಿಕೆ ಕೊಟ್ಟಿರುತ್ತಾನೆ. ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ವಾಯಿತು ಎಂದು ಹೇಳಿರುವುದಿಲ್ಲ ಈತ ಮಹಾ ಮೋಸಗಾರ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆ ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ರವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿರುತ್ತಾನೆ. ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು, ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು ಇವನನ್ನು ಯಾರು ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ರವರು ಯಾರು ಈತನನ್ನು ಸೇರಿಸುವುದಿಲ್ಲ. ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ. ಈತ ಎಲ್ಲಾದರೂ ನಮ್ಮಗಳ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ… ದರ್ಶನ್ ರವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗ ಬೇಡಿ ಎಂದು ದಿನಕರ್ ತೂಗುದೀಪ ತಿಳಿಸಿದ್ದಾರೆ.

https://www.facebook.com/share/p/1DjT3P9Ggz

https://www.instagram.com/p/DXZHWbXmK3T/?utm_source=ig_web_copy_link&igsh=MzRlODBiNWFlZA==

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular