HomeKarnataka`ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂತ ತಲೆ ಕೆಡೆಸಿಕೊಳ್ಳಬೇಡಿ! ಈ ಕೆಲಸ ಮಾಡಿದ್ರೆ ಒಂದೇ ಸಲ ಬರಲಿದೆ...

`ಗೃಹಲಕ್ಷ್ಮಿ’ ಹಣ ಬಂದಿಲ್ಲ ಅಂತ ತಲೆ ಕೆಡೆಸಿಕೊಳ್ಳಬೇಡಿ! ಈ ಕೆಲಸ ಮಾಡಿದ್ರೆ ಒಂದೇ ಸಲ ಬರಲಿದೆ 4,000 ರೂ.!

ಬೆಂಗಳೂರು:  ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ  ರೂ.2000/- ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸಿದ  ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್‍ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗದೇ ಇರುವವರು ತಮ್ಮ ಖಾತೆ ಹೊಂದಿರುವ ಬ್ಯಾಂಕ್‍ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್‍ಡೇಟ್ ಮಾಡಿಸಿಕೊಳ್ಳುವುದು ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್‍ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಬಾರದೇ ಇರಲು ಇದೇ ಕಾರಣ…!

ನಿಮ್ಮ ಖಾತೆಗೆ ಆಧಾರ್ ಸೀಡಿಂಗ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಇನ್ನು ಬ್ಯಾಂಕಿನಲ್ಲಿ ನಿಮ್ಮ ಸಾಲ ಪಡೆದುಕೊಂಡ ಖಾತೆಯನ್ನು  ಗೃಹಲಕ್ಷ್ಮಿ ಯೋಜನೆಗೂ ಕೊಟ್ಟಿದ್ದರೆ, ಹಣ ನಿಮ್ಮ ಸಾಲಕ್ಕೆ ಜಮಾ ಆಗಲು ಬಹುದು.  ರೇಷನ್ ಕಾರ್ಡ್ ತಿದ್ದುಪಡಿ  ಆಗಿದೆಯಾ ಅಂತಾ ಆನ್ಲೈನ್ ನಲ್ಲಿ ಎಂಬುದನ್ನು ತಿಳಿದುಕೊಳ್ಳಿ. ಅಕ್ಟೋಬರ್ ತಿಂಗಳ ಕೊನೆಯಲ್ಲಿ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ಎರಡು ಕಂತಿನ ಹಣ ಜಮಾ ಮಾಡಲಾಗುತ್ತದೆ. ಹೀಗಾಗಿ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸಿ.

For Latest News Updates, Join Our Whatsapp Community🚩
RELATED ARTICLES

Most Popular