HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ’ಗೆ ‘ಡಬಲ್ ಡೆಕ್ಕರ್ ರೈಲು’ಗಳ ಸೇರ್ಪಡೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ’ಗೆ ‘ಡಬಲ್ ಡೆಕ್ಕರ್ ರೈಲು’ಗಳ ಸೇರ್ಪಡೆ

ಬೆಂಗಳೂರು: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಡಬಲ್ ಡೆಕ್ಕರ್ ರೈಲುಗಳು ಸೇರ್ಪಡೆಯಾಗಲಿದೆ. ಮೂರು ಹಂತದಲ್ಲಿ ಮೇಲ್ಸೇತುವೆ ಯೋಜನೆ ವಿನ್ಯಾಸ ರೂಪಿಸಲು ಚಿಂತನೆ ನಡೆದಿದ್ದು, ಟೆಂಡರ್ ಆಹ್ವಾನಿಸಲಾಗಿದೆ.

ಡಬಲ್ ಡೆಕ್ಕರ್ ಯೋಜನೆಗಾಗಿ ಈಗಾಗಲೇ ಜಿಯೋ ಟೆಕ್ನಿಕಲ್ ಸರ್ವೆ ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ಎತ್ತರಿಸಿದ ಮಾರ್ಗ, ನಿಲ್ದಾಣಗಳ ವಿನ್ಯಾಸ ರೂಪಿಸಲು ಮುಂದಾಗಿದೆ.

ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರವರೆಗೆ, ಹೊಸಹಳ್ಳಿಯಿಂದ ಕಡಬಗೆರೆವರೆಗೆ ಸೇರಿ ಎರಡು ಕಾರಿಡಾರ್ ಗಳನ್ನು ಮೂರನೇ ಹಂತದ ಮೆಟ್ರೋ ರೈಲು ಯೋಜನೆ ಒಳಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ 15,611 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಅನುಮತಿ ನೀಡಿದ ಬಳಿಕ ಯೋಜನೆ ಅನುಷ್ಠಾನ ಪ್ರಕ್ರಿಯೆ ಚುರುಕುಗೊಂಡಿದೆ. 3ಹಂತದಲ್ಲಿ ಡಬಲ್ ಡೆಕ್ಕರ್ ಯೋಜನೆ ವಿನ್ಯಾಸಕ್ಕೆ ಟೆಂಡರ್ ಕರೆಯಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular