‘ಡಬಲ್ ಇಂಜಿನ್ ಈಗ ಟ್ರಿಪಲ್ ಇಂಜಿನ್ ಸರ್ಕಾರ’: ಏಕನಾಥ್ ಶಿಂಧೆ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಡಬಲ್ ಇಂಜಿನ್ ಸರ್ಕಾರ ಈಗ ಟ್ರಿಪಲ್ ಇಂಜಿನ್ ಸರ್ಕಾರವಾಗಿದೆ. ಅಜಿತ್ ಪವಾರ್ ಅವರ ಅನುಭವವು ಮಹಾರಾಷ್ಟ್ರವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ 40 ಎನ್‌ಸಿಪಿ ಶಾಸಕರು ಮತ್ತು ಪ್ರಫುಲ್ ಪಟೇಲ್ ಸೇರಿದಂತೆ 3 ಸಂಸದರನ್ನು ಪಕ್ಷದಿಂದ ದೂರವಿಟ್ಟು ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ರಾಜಭವನದಿಂದ ಹೊರನಡೆಯುವಾಗ ಶಿಂಧೆ, ರಾಜ್ಯದ ಅಭಿವೃದ್ಧಿಗಾಗಿ ಅಜಿತ್ ಪವಾರ್ ಮತ್ತು ಅವರ ಬೆಂಬಲಿಗರನ್ನು ನಾನು ಸ್ವಾಗತಿಸುತ್ತೇನೆ. ಅವರ ಅನುಭವವು ತುಂಬಾ ಉಪಯುಕ್ತವಾಗಿರುತ್ತದೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ ಶಿವಸೇನೆ(ಯುಬಿಟಿ) ವಕ್ತಾರ ಆನಂದ್ ದುಬೆ ಅವರು, ಪವಾರ್ ವಿರುದ್ಧ ವಾಗ್ದಾಳಿ ನಡೆಸಿ ನಿನ್ನೆಯವರೆಗೂ ಮಹಾರಾಷ್ಟ್ರ ಸರ್ಕಾರವನ್ನು ಶಪಿಸುತ್ತಿದ್ದ ವಿರೋಧ ಪಕ್ಷದ ನಾಯಕರು ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದಕ್ಕೆ ಇಡಿ ಭಯ ಕಾರಣವೇ ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read