HomeKarnatakaBREAKING : ಬೆಂಗಳೂರಿನ ಶೆಡ್ ನಲ್ಲಿ ‘ಡಬಲ್ ಮರ್ಡರ್’ ಪ್ರಕರಣ : ಆರೋಪಿ ಅರೆಸ್ಟ್.!

BREAKING : ಬೆಂಗಳೂರಿನ ಶೆಡ್ ನಲ್ಲಿ ‘ಡಬಲ್ ಮರ್ಡರ್’ ಪ್ರಕರಣ : ಆರೋಪಿ ಅರೆಸ್ಟ್.!

ಬೆಂಗಳೂರು : ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ ಗಳನ್ನು ನಿಲ್ಲಿಸುವ ಜಾಗದಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಸರ್ವಿಸ್ ಶೆಡ್ ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ನನ್ನು ಬಂಧಿಸಲಾಗಿದ್ದು, ಕೊಲೆ ಹಿಂದಿನ ಕಾರಣ ತಿಳಿದು ಬಂದಿಲ್ಲ.

ಎಸ್.ಆರ್.ಎಸ್ ಟ್ರಾವೆಲ್ಸ್ ಬಸ್ ಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ನಾಗೇಶ್ (55) ಹಾಗೂ ಮಂಜುನಾಥ್ (50) ಮೃತ ದುರ್ದೈವಿಗಳು.ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಕೊಲೆಯಾಗಿರುವ ಸಾಧ್ಯತೆಯಿದ್ದು. ಬಾಗಲೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular