ವಿಜಯಪುರ : ರಾಜ್ಯದಲ್ಲಿ ಡಬಲ್ ಮರ್ಡರ್ ನಡೆದಿದ್ದು, ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರ ಬರ್ಬರ ಹತ್ಯೆಯಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಈ ಕೊಲೆ ನಡೆದಿದೆ.
ಕೊಲೆಯಾದವರನ್ನು ಸಾಗರ ಬೆಳುಂಡಗಿ (25) ಹಾಗೂ ಇಸಾನ್ ಖುರೇಷಿ (24) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.