ರಾಯಚೂರು: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಿಎಸ್ ಎಫ್ ಕ್ಯಾಂಪ್ ನಲ್ಲಿ ನಡೆದಿದೆ.
ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಬಮ್ಮ (26) ಮೃತ ಮಹಿಳೆ. ನಾಲ್ಕು ವರ್ಷಗಳ ಹಿಂದೆ ಮಾಬಮ್ಮಳನ್ನು ಹುಸೇನಬಾಷಾ ಜೊತೆ ವಿವಾಹ ಮಾಡಿ ಕೊಡಲಾಗಿತ್ತು. ಮದುವೆಯಾದ ಒಂದು ವರ್ಷದ ಬಳಿಕ ಹುಸೇನಬಾಷಾ ಹಾಗೂ ಮನೆಯವರು ಪ್ರತಿದಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರಂತೆ. ವರದಕ್ಷಿಣೆ ತರುವಂತೆ ಪತಿ ಪತ್ನಿಯನ್ನು ಹಿಂಸಿಸುತ್ತಿದ್ದನಂತೆ.
ಇದೀಗ ಮಾಬಮ್ಮಳನ್ನು ಕೊಲೆ ಮಾಡಿ ನೇಣಿಗೆ ಹಾಕಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದು, ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಸೇನ್ ಬಾಷಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ.