BREAKING NEWS: ವರದಕ್ಷಿಣೆ ಕಿರುಕುಳ: 8 ತಿಂಗಳ ಗರ್ಭಿಣಿ ಆತ್ಮಹತ್ಯೆ

ಮೈಸೂರು: ವರದಕ್ಷಿಣೆ ಕಿರುಕುಳಕ್ಕೆ ನೊಂದು 8 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ.

ಚೈತ್ರಾ @ ಚಿಕ್ಕದೇವಿ (23) ಆತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಎರಡು ವರ್ಷಗಳ ಹಿಂದೆ ಚೈತ್ರಾ, ಕನಕಗಿರಿಯ ಶರತ್ ರಾಜು ಎಂಬಾತನ ಜೊತೆ ವಿವಾಹವಾಗಿದ್ದಳು. ಆದರೆ ಪತಿ, ಅತ್ತೆ, ಚಿಕ್ಕತ್ತೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಮೃತ ಚೈತ್ರಾಳ ತಂದೆ-ತಾಯಿ ಪತಿಯ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಚೈತ್ರಾ ಪತಿ ಶರತ್ ರಾಜುನನ್ನು ವಶಕ್ಕೆ ಪಡೆದಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read