HomeLatest Newsವರದಕ್ಷಿಣೆ ಕಿರುಕುಳ ಆರೋಪ ದೃಢ: ಸೇವೆಯಿಂದ ಶಿಕ್ಷಕ ವಜಾ

ವರದಕ್ಷಿಣೆ ಕಿರುಕುಳ ಆರೋಪ ದೃಢ: ಸೇವೆಯಿಂದ ಶಿಕ್ಷಕ ವಜಾ

ಯಾದಗಿರಿ: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಭಾಗಿಯಾದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಸುರಪುರ ತಾಲೂಕಿನ ತಿಂಥಿಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿನ ಸಹ ಶಿಕ್ಷಕ ತಿಪ್ಪಣ್ಣ ಅವರ ವಿರುದ್ಧದ ವರದಕ್ಷಿಣೆ ಕಿರುಕುಳ ಆರೋಪ ದೃಢಪಟ್ಟಿದ್ದು, ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾಗೊಳಿಸಿ ಡಿಡಿಪಿಐ ಚನ್ನಬಸಪ್ಪ ಮುಧೋಳ ಆದೇಶಿಸಿದ್ದಾರೆ. ತಿಪ್ಪಣ್ಣ ಅವರನ್ನು ಸೇವೆಯಲ್ಲಿ ಮುಂದುವರೆಸಿದರೆ ಸಮಾಜದ ಮೇಲೆ, ಸಹವರ್ತಿ ಅಧಿಕಾರಿ, ಸಿಬ್ಬಂದಿ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ. ಹೀಗಾಗಿ ಸೇವೆಯಿಂದ ವಜಾಗೊಳಿಸುವುದು ಸೂಕ್ತವೆಂದು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular