BIG NEWS : ಪತಿ, ಕುಟುಂಬದಿಂದ ವರದಕ್ಷಿಣೆ ಕಿರುಕುಳ : ಮೈಸೂರಿನಲ್ಲಿ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

ಮೈಸೂರು : ಪತಿ, ಕುಟುಂಬದಿಂದ ವರದಕ್ಷಿಣೆ ಕಿರುಕುಳ ಕಿರುಕುಳಕ್ಕೆ  ಬೇಸತ್ತ ಮಹಿಳೆಯೊಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ವಿಜಯಲಕ್ಷ್ಮಿ (35) ಎಂದು ಗುರುತಿಸಲಾಗಿದೆ. 12 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬುವವರನ್ನು ಮದುವೆಯಾಗಿದ್ದ ವಿಜಯಲಕ್ಷ್ಮಿ ಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು.

ಹಣಕ್ಕಾಗಿ ಅತ್ತೆ, ಮಾವ, ಗಂಡ, ಮೈದುನರಿಂದಲೂ ಕಿರುಕುಳ ನೀಡಲಾಗುತ್ತಿತ್ತು. ಇದರಿಂದ ಮನನೊಂದ ಮಹಿಳೆ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಹೆತ್ತವರು ಪ್ರಕರಣ ದಾಖಲಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read