HomeKarnatakaವರದಕ್ಷಿಣೆ ಕಿರುಕುಳ: ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳ: ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದು ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವಾದಕುಂಟೆ ಬಳಿ ಘಟನೆ ನಡೆದಿದೆ. ಲಕ್ಕಪ್ಪನಹಳ್ಳಿ ನಿವಾಸಿ ಭವ್ಯಾ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿರುಮಲೇಗೌಡನಪಾಳ್ಯದ ಕಿರಣ್ ಜೊತೆ ಭವ್ಯಾ ಮದುವೆಯಾಗಿತ್ತು. ವರದಕ್ಷಿಣೆ ತರಲಿಲ್ಲವೆಂದು ಪದೇಪದೇ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಪತಿ ಕಿರಣ್, ಅತ್ತೆ ಭಾಗ್ಯಮ್ಮ, ಅಕ್ಕ ಲಾವಣ್ಯ, ತಂಗಿ ಭವ್ಯಾ ಅವರು ಕಿರುಕುಳ ನೀಡುತ್ತಿದ್ದರು. ಪತಿ ಕುಟುಂಬದ ಕಿರುಕುಳ ತಾಳಲಾರದೆ ಭವ್ಯಾ ತವರು ಮನೆ ಸೇರಿಕೊಂಡಿದ್ದರು. ಇದರಿಂದ ನೊಂದು ರೈಲಿಗೆ ತಲೆ ಕೊಟ್ಟು ಭವ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಯಶವಂತಪುರ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular