ಹಾಸನ: ಪತಿ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ.
21 ವರ್ಷದ ರಕ್ಷಿತಾ ಮೃತ ಮಹಿಳೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ವರ್ಷದ ಹಿಂದೆ ರಕ್ಷಿತಾ, ಹಲೇಪಾಳ್ಯದ ಪುನೀತ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ ಹಾಗೂ ಕುಟುಂಬದವರು ವರದಕ್ಷಿಣೆಗಾಗಿ ಹಿಂಸಿಸುತ್ತಿದ್ದರು.
ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು. ಇದರಿಂದ ಬೇಸತ್ತ ರಕ್ಷಿತಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾರೆ.