HomeKarnatakaವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಕೋಲಾರ: ಪತಿ ಹಾಗೂ ಕುಟುಂಬದವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ.

25 ವರ್ಷದ ಸೌಮ್ಯ ಮೃತ ಮಹಿಳೆ. ಕೆಜಿಎಫ್ ನ ಕಂಗನಲ್ಲೂರು ಗ್ರಾಮದವರು. ತವರು ಮನೆಗೆ ಬಂದಿದ್ದ ಸೌಮ್ಯ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ವರ್ಷಗಳ ಹಿಂದೆ ಸುನೀಲ್ ಕುಮಾರ್ ಎಂಬುವವರ ಜೊತೆ ಸೌಮ್ಯ ವಿವಾಹವಾಗಿತ್ತು. ಪತಿ ಹಾಗೂ ಆತನ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ನೊಂದು ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸೌಮ್ಯ ಪೋಷಕರು ಬಂಗಾರಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular