ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ  ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು:

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ.

ಅರ್ಹರು ಸೇವಾಸಿಂಧುವಿನ https://sevasindhu.karnataka.gov.in  ವೆಬ್‍ಸೈಟ್ ಹಾಗೂ ಗ್ರಾಮಒನ್, ಕರ್ನಾಟಕ ಒನ್‍ನಲ್ಲಿ ಆನ್‍ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 29 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಂಟೋನ್‍ಮೆಂಟ್‍ನ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕರ ಶಾಲೆ ಎದುರುಗಡೆಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಅರುಣ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read