HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

BIG NEWS: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕೆಲ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರ ನಡೆಸಿದವರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ಘಟನೆ ನಡೆದಿದೆ.

ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಜೆಡಿಎಸ್ ಬೆಂಬಲಿತ ಸದಸ್ಯ ಮಂಜುನಾಥ್ ಹಲ್ಲೆಗೊಳಗಾದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಪಣಹಳ್ಳಿ ನಿವಾಸಿ ಬೋರೇಗೌಡ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಮಾತನಾಡಬೇಕು ಎಂದು ಮಂಜುನಾಥ್ ನನ್ನು ಕರೆಸಿಕೊಂಡಿದ್ದ ಬೋರೇಗೌಡ ಮತ್ತು ಬೆಂಬಲಿಗರು ಪಂಚಪಾಳ್ಯದ ಬಳಿ ಬರುತ್ತಿದ್ದಂತೆ ಚಾಕುವಿನಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular