HomeKarnatakaಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಸಂಸದ ಡಾ.ಮಂಜುನಾಥ್

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಸಂಸದ ಡಾ.ಮಂಜುನಾಥ್

ರಾಮನಗರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡುವ ಮೂಲಕ ಬಿಜೆಪಿ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಮಾನವೀಯತೆ ಮೆರೆದಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ-ಸಾತನೂರು ಮಾರ್ಗ ಮಧ್ಯೆ ಅಪಘಾತವೊಂದು ಸಂಭವಿಸಿ, ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಸಂಸದ ಡಾ.ಸಿ.ಎನ್.ಮಂಜುನಾಥ್, ತಕ್ಷಣ ಕಾರು ನಿಲ್ಲಿಸಿ, ಗಾಯಾಳುವನ್ನು ಪರೀಕ್ಷಿಸಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ವೈದ್ಯರಿಗೆ ಕರೆ ಮಾಡಿ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಖ್ಯಾತ ಹೃದ್ರೋಗ ತಜ್ಞರೂ ಆಗಿರುವ ಸಂಸದ ಡಾ.ಸಿ.ಎನ್.ಮಂಜುನಾಥ್ ಗಾಯಾಳುವಿಗೆ ಸ್ಪಂದಿಸಿ, ಚಿಕಿತ್ಸೆ ನೀಡಿದ ರೀತಿ, ಮಾನವೀಯತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular