HomeKarnatakaBIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರು ಭೇಟಿಗೆ ಗೃಹ ಸಚಿವ ಪರಮೇಶ್ವರ್...

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರು ಭೇಟಿಗೆ ಗೃಹ ಸಚಿವ ಪರಮೇಶ್ವರ್ ವ್ಯಂಗ್ಯ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರು ಭೇಟಿಗೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಅವರು ರಾಜ್ಯಕ್ಕೆ ಬಂದೆ ಬರ್ತಾರೆ ಎಂಬುದು ಗೊತ್ತಿರುವ ವಿಚಾರ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ಅಮಿತ್ ಶಾ ಮೈಸೂರಿಗೆ ಬರಲಿ. ಅವರು ಏನ್ ಮಾಡ್ತಾರೋ ಮಾಡಲಿ. ನಾವು ಏನ್ ಮಾಡಬೇಕು ಅದನ್ನು ಮಾಡುತ್ತೇವೆ. ಚುನಾವಣೆ ಇದ್ದಾಗ ಅಮಿತ್ ಶಾ ಬರುತ್ತಾರೆ ಅಷ್ಟೇ ಎಂದು ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಅನುದಾನ ಬಿಡುಗಡೆ ವಿಚಾರವಾಗಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಯಾವಾಗಿದೆ ಎಂಬುದು ನಿಜ. ಆದರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಅತಿದೊಡ್ಡ ಸುಳ್ಳು ಹೇಳಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದ ಸಚಿವರಾಗಿ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿರುವುದು ಬೇಸರ ತಂದಿದೆ. ಬರ ವಿಚಾರವಾಗಿ ರಾಜ್ಯದಲ್ಲಿ ಸರ್ವೆ ಮಾಡಿಕೊಂಡು ಹೋಗಿದ್ದಾರೆ. ಆದರೂ ಹಣ ಬಿಡುಗಡೆ ಮಾಡಿಲ್ಲ. ನಮಗೆ ನೀಡಬೇಕಾದ ಹಣ ಬಿಡಿಗಡೆ ಮಾಡಿ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular