BIG NEWS: ಶೀಘ್ರದಲ್ಲೇ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನ; ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಆರೋಪಿಯ ಕುರುಹುಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು ಎಂದರು.

ಪ್ರಕರಣ ಸಂಬಂಧ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಇಲ್ಲಿಯವರೆಗೆ ಏನೆಲ್ಲಾ ನಡೆದಿದೆ ಎಂಬುದರ ಬಗ್ಗೆ ಚರ್ಚಿಸಲಾಗಿದೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುವುದು. ತನಿಖೆ ವೇಳೆ ಕೆಲ ಕುರುಹುಗಳು ಸಿಕ್ಕಿವೆ. ಎನ್ ಐಎ, ಎನ್ ಎಸ್ ಜಿ ಕೂಡ ಅವರದ್ದೇ ಆದ ರೀತಿಯಲ್ಲಿ ತನಿಖೆ ಮಾಡುತ್ತಿದ್ದಾರೆ. ಬೆಂಗಳೂರು ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆರೋಪಿಯ ಚಲನವಲನಗಳನ್ನು ಕಂಡುಹಿಡಿಯುವ ಕೆಲಸವಾಗುತ್ತಿದೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read