HomeKarnatakaBIG NEWS: ವಕ್ಫ್ ಬೋರ್ಡ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಸಿಎಂ ಸೂಚನೆ: ಗೃಹ...

BIG NEWS: ವಕ್ಫ್ ಬೋರ್ಡ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಸಿಎಂ ಸೂಚನೆ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಭೂಮಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ನೋಟಿಸ್ ಹಿಂಪಡೆಯುವಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಕ್ಫ್ ಬೋರ್ಡ್ ನಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ರೈತರಿಗೆ ನೀಡಲಾಗಿರುವ ನೋಟಿಸ್ ವಾಪಾಸ್ ಪಡೆಯಲಾಗುವುದು. ಕಂದಾಯ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಭೂ ವಿವಾದ ಬಗೆಹರಿಸಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಟಿಸ್ ಹಿಂಪಡೆಯಲಾಗುವುದು. ವಿವಾದ ಇಲ್ಲಿಗೆ ಮುಗಿದಿದೆ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತೆ ಗೊತ್ತಿಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯ. ಅದರಲ್ಲಿ ಏನಿದೆಯೋ ಅದರಂತೆ ಆಗುತ್ತೆ. ವಕ್ಫ್ ದಾಖಲಾತಿಯಲ್ಲೊಂದೇ ಇದ್ದರೆ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular