HomeKarnatakaBIG NEWS: ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಗೃಹ ಸಚಿವ ಪರಮೇಶ್ವರ್

BIG NEWS: ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಗೃಹ ಸಚಿವ ಪರಮೇಶ್ವರ್

ತುಮಕೂರು: ಅರ್ಹತೆ ಇದ್ದರೂ ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡಿಲ್ಲ, ಡಿಸಿಎಂ ಸ್ಥಾನದಿಂದಲೂ ಡಿಪ್ರಮೋಟ್ ಮಾಡಿದರು ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹರಿಪ್ರಸಾದ್ ಹೇಳಿಕೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ತುಮಕೂರಿನ ಪಾವಗಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನನ್ನ ಮೇಲಿನ ಅಭಿಮಾನದಿಂದ ಅಭಿಪ್ರಾಯ ತಿಳಿಸಿದ್ದಾರೆ. ಹಾಗಾಗಿ ಅವರಿಗೆ ಅಭಿನಂದಿಸುತ್ತೇನೆ. ಸಾಕಷ್ಟು ಜನ ಹೀಗೆ ಹೇಳುತ್ತಿದ್ದಾರೆ ಅದು ಅವರ ಅಭಿಮಾನ. ಸಿಎಂ ಆಯ್ಕೆಯನ್ನು ಅಂತಿಮವಾಗಿ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕಮಾಂಡ್ ಈಗ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದೆ. ಸರ್ಕಾರ ನಡೆಯುತ್ತಿದೆ. ಎಲ್ಲವೂ ಪಕ್ಷ ಹಾಗೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular