HomeKarnatakaBIG NEWS: ವರ್ಗಾವಣೆ ದಂಧೆ ಆಗಿದ್ದರೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ; ವಿಪಕ್ಷಗಳಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು

BIG NEWS: ವರ್ಗಾವಣೆ ದಂಧೆ ಆಗಿದ್ದರೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ; ವಿಪಕ್ಷಗಳಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು

ಬೆಂಗಳೂರು: ಸರ್ಕಾರದ ವಿರುದ್ಧ ‘ವರ್ಗಾವಣೆ ದಂಧೆ’ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ವರ್ಗಾವಣೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆರೊಪಕ್ಕೆ ಸಂಬಂಧಿಸಿದಂತೆ ವರ್ಗಾವಣೆ ದಂಧೆ ಆಗಿದ್ದರೆ ವಿಪಕ್ಷಗಳು ಅಧಿವೇಶನದಲ್ಲಿ ಮಾತನಾಡಲಿ ಎಂದು ಟಾಂಗ್ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿವೇಕಾನಂದಗೂ, ಪೊಲೀಸ್ ಇಲಾಖೆಯಲ್ಲಿನ ವಿವೇಕಾನಂದಗೂ ಸಂಬಂಧವಿಲ್ಲ. ಅವರು ಹೇಳಿದ್ದು ಕಾಕತಾಳೀಯವಾಗಿರಬಹುದು. ಸಮಾಧಾನವಾಗುವ ರೀತಿಯಲ್ಲೇ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular