BIG NEWS: ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎನ್ನುವುದು ಕಷ್ಟಕರ ಎಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಪಕ್ಷಕ್ಕೆ ಬದ್ಧರಾಗಿರುತ್ತೇವೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಕಷ್ಟ. ಪಕ್ಷಾಂತರವನ್ನು ತಡೆಯಲು ಸಾಧ್ಯವಿಲ್ಲ. ಕಾನೂನಿನಲ್ಲಿ ನಿಷೇಧಿಸದರೆ ಮಾತ್ರ ಪಕ್ಷಾಂತರ ನಿಲ್ಲುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೀ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸಿ.ಪಿ.ಯೋಗೇಶ್ವರ್ ಮರಳಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ. ಇತ್ತೀಚೆಗೆ ಹರಿಯಾಣ, ಮಹರಾಷ್ಟ್ರಗಳಲ್ಲಿಯೂ ಇಂತಹ ಬೆಳವಣಿಗೆ ನಡೆದಿದೆ. ಪಕ್ಷ ನಿಷ್ಠರು ಕೆಲವರು ಇದ್ದಾರೆ. ಪಕ್ಷಾಂತರವನ್ನು ತಡೆಯಲಾಗದು. ಕಾನೂನಿನಲ್ಲಿಯೂ ಪಕ್ಷಾಂತರಕ್ಕೆ ಅವಕಾಶವಿದೆ ಎಂದರು.

ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಗೆ ಸ್ವಾಗತ ಮಾಡುತ್ತೇನೆ. ಹೈಕಮಾಂಡ್ ಅವರನ್ನು ಚನ್ನಪಟ್ಟಣದಿಂದ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ. ಇದು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಶಕ್ತಿ ನೀಡಲಿದೆ ಎಂದರು.

ಇನ್ನು ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಅನಿವಾರ್ಯ ಅನ್ನುವುದಕ್ಕಿಂತ ಇವತ್ತಿನ ಪರಿಸ್ಥಿತಿಗೆ ಅವಶ್ಯಕ ಎನ್ನಬಹುದು ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read