ಚೈತ್ರ ನವರಾತ್ರಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವರನಟ ಡಾ. ರಾಜ್ ಕುಮಾರ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ಹಾಡೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಶುಭ ಕೋರಿದ್ದಾರೆ.
ರಾಜ್ ಕುಮಾರ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ‘ಶ್ರೀ ಚಾಮುಂಡೇಶ್ವರಿ’ ಎಂಬ ವಿಡಿಯೋ ಭಕ್ತಿಗೀತೆಯ ಯೂಟ್ಯೂಬ್ ಲಿಂಕ್ ಅನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
‘ಜಗತ್ಜನನಿ ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ಪ್ರಜ್ಞೆ ಮತ್ತು ಶಕ್ತಿಯನ್ನು ತುಂಬಲಿದೆ’ ಎಂದು ಎಕ್ಸ್ ನಲ್ಲಿ ಬರೆದುದಿದ್ದಾರೆ. ದೈವದ ಭಕ್ತಿ ಸಾರುವ ವಿಡಿಯೋ ಹಂಚಿಕೊಂಡಿದ್ದಾರೆ.
1970ರಲ್ಲಿ ಬಿಡುಗಡೆಯಾದ ಚಿತ್ರದಲ್ಲಿ ರಾಜ್ಕುಮಾರ್, ಜಯಂತಿ, ಭಾರತಿ, ನರಸಿಂಹರಾಜು ಅವರು ಅಭಿನಯಿಸಿದ್ದಾರೆ. ಶ್ರೀ ಚಾಮುಂಡೇಶ್ವರಿ ಹಾಡನ್ನು ಪಿ. ಲೀಲಾ, ಎಸ್. ಗೋವಿಂದರಾಜು ಹಾಡಿದ್ದಾರೆ. ಪ್ರಭಾಕರ ಶಾಸ್ತ್ರಿ ಅವರು ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಟಿ. ಜಿ. ಲಿಂಗಪ್ಪ ಅವರು ಹಾಡಿಗೆ ಸಂಗೀತ ನೀಡಿದ್ದಾರೆ.

