‘ಪುನೀತ್ ಹೃದಯ ಜ್ಯೋತಿ’ ಯೋಜನೆಯಡಿ ಒಂದು ತಿಂಗಳಲ್ಲಿ 348 ಮಂದಿ ಜೀವ ರಕ್ಷಣೆ

ಬೆಂಗಳೂರು: ಹಠಾತ್‌ ಹೃದಯಾಘಾತದ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆಗಾಗಿ 2023ರ ಮಾರ್ಚ್‌ನಲ್ಲಿ ಮೊದಲ ಹಂತದಲ್ಲಿ ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ ಜಾರಿ ಮಾಡಲಾಯಿತು. 2024ರ ಮಾರ್ಚ್‌ ತಿಂಗಳಲ್ಲಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು.

ಈವೆರೆಗೆ ಯೋಜನೆಯಡಿ 5,989 ತೀವ್ರ ಹೃದಯಾಘಾತ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 3 ಸಾವಿರಕ್ಕೂ ಅಧಿಕ ಹೃದಯಾಘಾತದ ರೋಗಿಗಳಿಗೆ ಯಶಸ್ವಿ ಚಿಕಿತ್ಸೆಯನ್ನು ನೀಡಲಾಗಿದೆ.

ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ 348 ಮಂದಿಯ ಜೀವ ರಕ್ಷಿಸಲಾಗಿದೆ. ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3 ಲಕ್ಷಕ್ಕೂ ಅಧಿಕ ಮಂದಿಗೆ ಇಸಿಜಿ ಪರೀಕ್ಷೆ ಮಾಡಿಸಲಾಗಿದೆ.

ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಎರಡನೇ ಹಂತದಲ್ಲಿ ʼಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ. ಈ ಚುಚ್ಚುಮದ್ದು ಒಂದು ಬಾಟಲಿಗೆ 30 ಸಾವಿರ ರೂ. ದರ ಇದ್ದು, ಉಚಿತವಾಗಿ ನೀಡಲಾಗುತ್ತಿದೆ.

ಹೃದಯಾಘಾತಕ್ಕೆ ಒಳಗಾದವರಿಗೆ ಇಸಿಜಿ ಪರೀಕ್ಷೆ ನಡೆಸಿ, ಚುಚ್ಚುಮದ್ದು ಅಗತ್ಯವಿದ್ದಲ್ಲಿ ನೀಡಲಾಗುತ್ತಿದೆ. ತೃತೀಯ ಹಂತದ ಚಿಕಿತ್ಸೆಗೆ ʼಹಬ್‌ ಆಸ್ಪತ್ರೆʼಗಳಾಗಿ ನೋಂದಾಯಿತವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಸೇರಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಇದೇ ಚುಚ್ಚುಮದ್ದುಗಳಿಗೆ ರವಾನಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read