BIG NEWS : ಬೆಳೆ ಹಾನಿಯಾದ ರೈತರ ಕರಡು ಪಟ್ಟಿ ಪ್ರಕಟ ; ಆಕ್ಷೇಪಣೆ ಸಲ್ಲಿಸಲು ಸೆ. 7 ಕೊನೆಯ ದಿನ

2025-26 ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ ಹಾಗೂ ಅತೀವೃಷ್ಠಿಯಿಂದ 2025 ನೇ ಸಾಲಿನ ಆಗಸ್ಟ್ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿದಂತೆ, ಪರಿಹಾರವನ್ನು ಪಾವತಿಸುವ ಕುರಿತು ಜಂಟಿ ಸಮೀಕ್ಷೆಯನ್ನು ಜರುಗಿಸಲಾಗಿದೆ.

ಧಾರವಾಡ ತಾಲೂಕಿನಲ್ಲಿ 16,910.21 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 895 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 17,805.21 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಹುಬ್ಬಳ್ಳಿ ತಾಲೂಕಿನಲ್ಲಿ 17,998.32 ಹೇಕ್ಟರ್ ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ಮತ್ತು ಹುಬ್ಬಳ್ಳಿ ನಗರ ತಾಲೂಕಿನಲ್ಲಿ 1,303.29 ಹೇಕ್ಟರ್ ಹೆಕ್ಟೆರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ.

ನವಲಗುಂದ ತಾಲೂಕಿನಲ್ಲಿ 23,993.98 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 2,323.37 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 26,317.35 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಅಣ್ಣಿಗೇರಿ ತಾಲೂಕಿನಲ್ಲಿ 15,324.87 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 1063 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 16,387.87 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಕುಂದಗೋಳ ತಾಲೂಕಿನಲ್ಲಿ 13,440.23 ಹೇಕ್ಟರ್ ಕೃಷಿ ಕ್ಷೇತ್ರ ಮತ್ತು 244.71 ಹೇಕ್ಟರ್ ತೋಟಗಾರಿಕೆ ಕ್ಷೇತ್ರ ಸೇರಿದಂತೆ ಧಾರವಾಡ ತಾಲೂಕಿನಲ್ಲಿ ಒಟ್ಟು 13,684.94 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯಲ್ಲಿ 88,970.90 ಹೇಕ್ಟರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526.08 ಹೇಕ್ಟರ್ ತೋಟಗಾರಿಕೆ ಪ್ರದೇಶದ ಬೆಳೆಗಳು ಸೇರಿದಂತೆ ಒಟ್ಟು 93,496.98 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಜಂಟಿ ಸಮೀಕ್ಷೆಯ ಪರಿಶೀಲನಾ ವರದಿಯಂತೆ ಒಟ್ಟು 93,496.98 ಹೆಕ್ಟರ್ ಕ್ಷೇತ್ರಗಳಲ್ಲಿ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಛೇರಿ, ಉಪವಿಭಾಧಿಕಾರಿಗಳ ಕಛೇರಿ, ಸಂಬಂಧಿಸಿದ ತಹಶೀಲ್ದಾರರ ಕಛೇರಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಛೇರಿ, ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಅಂತರಜಾಲ https://dharwad.nic.in/…/document…/disaster-management/ ದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.

ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ, ಕೃಷಿ ಅಥವಾ ತೋಟಗಾರಿಕಾ ಕಛೇರಿಗಳಲ್ಲಿ ಹಾಗೂ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ 07, 2025 ರ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸಬೇಕು.

ಸೆಪ್ಟೆಂಬರ 07, 2025 ರಂದು ಸಂಜೆ 5 ಗಂಟೆವರೆಗೆ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಿ, ಯಾದಿಯನ್ನು ಅಂತಿಮಗೊಳಿಸಲಾಗುವುದು. ನಿಗದಿ ಪಡಿಸಿದ ಅವಧಿಯ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read