HomeKarnatakaಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಕಲಾವಿದ; ಹೃದಯಾಘಾತದಿಂದ ಸಾವು

ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಕಲಾವಿದ; ಹೃದಯಾಘಾತದಿಂದ ಸಾವು

ದೇವನಹಳ್ಳಿ: ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಏಕಾಏಕಿ ಕುಸಿದು ಬಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ.

ಎನ್.ಮುನಿಕೆಂಪಣ್ಣ (72) ಮೃತ ದುರ್ದೈವಿ. ಕುರುಕ್ಷೇತ್ರ ನಾಟಕ ಪ್ರದರ್ಶನ ಮಾಡುತ್ತಿದ್ದ ವೇಳೆ ತಡರಾತ್ರಿ ವೇದಿಕೆ ಮೇಲೆಯೇ ಕಲಾವಿದ ಮುನಿಕೆಂಪಣ್ಣ ಕುಸಿದುಬಿದ್ದಿದ್ದಾರೆ. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತ ಮುನಿಕೆಂಪಣ್ಣ ದೇವನಹಳಿಯ ಸಾಹುತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ನಟಿಸುತ್ತಿದ್ದಾಗಲೇ ಇದ್ದಕ್ಕಿದ್ದಂತೆ ವೇದಿಕೆ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಲಾವಿದನ ಸಾವು ಕಣ್ಣಾರಕಂಡ ಪ್ರೇಕ್ಷಕರು ಆಘಾತಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular