HomeKarnatakaಬರ ಇದೆ ಎಂದು ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ:...

ಬರ ಇದೆ ಎಂದು ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ: ಸಿಎಂ ಮಾಹಿತಿ

ಮೈಸೂರು: ಕೇಂದ್ರ ತಂಡದ ವರದಿ ಆಧರಿಸಿ ಬರ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಇದೆ ಎಂದು ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣ ಪ್ರದೇಶದ ರೈತರನ್ನು ಖುದ್ದಾಗಿ ಭೇಟಿ ಮಾಡಿ ಸಮಸ್ಯೆ ಆಲಿಸುವಂತೆ ಕೇಂದ್ರ ಬರ ಅಧ್ಯಯನ ತಂಡಕ್ಕೆ ಕೇಳಿಕೊಂಡಿದ್ದು, ಈ ತಂಡ ನೀಡುವ ವರದಿ ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಮಾಹಿತಿ ಪ್ರಕಾರ 30 ಸಾವಿರ ಕೋಟಿ ರು.ನಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ 4860 ಕೋಟಿ ರೂಪಾಯಿ ನೀಡಬೇಕಿದ್ದು, ಕೇಂದ್ರ ತಂಡ ಅಧ್ಯಯನ ನಡೆಸಿದೆ. ತಂಡ ನೀಡಿದ ವರದಿ ಆಧಾರದ ಮೇಲೆ ಪರಿಹಾರ ನಿರ್ಧಾರವಾಗುತ್ತದೆ ಎಂದು ಹೇಳಿದ ಸಿಎಂ, ರಾಜ್ಯದಲ್ಲಿ ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರೆಯಲಿವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular