HomeKarnatakaಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ...

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ: ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ನಿರ್ವಹಣೆ ಕುರಿತಾಗಿ ತೀರ್ಮಾನಿಸಲು ಇಂದು ಸಂಪುಟ ಉಪಸಮಿತಿ ಸಭೆ ನಡೆಸಲಾಗುವುದು.

ಕಂದಾಯ ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎನ್. ಚೆಲುವರಾಯ ಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ, ಕೆ.ಎನ್. ರಾಜಣ್ಣ ಸದಸ್ಯರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಿತ್ತನೆ ಗುರಿ ಕಡಿಮೆಯಾಗಿದ್ದು, ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಈ ನಡುವೆ ಬರ ಘೋಷಣೆ ನಿಯಮ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಇನ್ನು ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು.

ಬೆಳೆ ನಷ್ಟ, ಮಳೆ ಕೊರತೆ ಬಗ್ಗೆ ಸಂಬಂಧಿತ ಇಲಾಖೆಗಳಿಂದ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಬರ ಘೋಷಣೆ ಮಾಡುವುದು, ಪರಿಹಾರ ನೀಡಲು ಎಷ್ಟು ಹಣ ಬೇಕಾಗಬಹುದು, ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದು, ಮೋಡ ಬಿತ್ತನೆ ಮೊದಲಾದ ವಿಷಯಗಳ ಕುರಿತು ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular